Headlines

ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ವಿದ್ಯಾರ್ಥಿ: ಪಾದಚಾರಿ ಸಾವು – Kannada News | Bengaluru Drunk Driver Kills Delivery Boy in Audi Crash

ಬೆಂಗಳೂರು, ಡಿಸೆಂಬರ್​​ 28: ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್​ನ 27ನೇ ಕ್ರಾಸ್​ನಲ್ಲಿ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸಂತೋಷ್(26) ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಮೃತ ಯುವಕ ಬೆಂಗಳೂರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಾರು ಚಾಲಕ ಅಬ್ದುಲ್ ರೆಹಮಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಾದಚಾರಿಗೆ ಕಾರು ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, HSR ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಹಿನ್ನೆಲೆ ರಕ್ತದ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *