ಕುಲ್ಗಾಮ್, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಐ-20 ಕಾರು (Car Accident) ಮೂವರು ಶಾಲಾ ಬಾಲಕಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂವರನ್ನು ತಕ್ಷಣ ಚಿಕಿತ್ಸೆಗಾಗಿ ಖಾಜಿಗುಂಡ್‌ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಒಬ್ಬಳು ಬಾಲಕಿ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಫಾತಿಮಾ ಜಾನ್ ಎಂದು ಗುರುತಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
