ಶಿವಮೊಗ್ಗ, ಏಪ್ರಿಲ್ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು ಬಂದಿರುವುದನ್ನು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಪರಿಕ್ಷಾ ಶುಲ್ಕ, ಕ್ರೀಡಾ ಶುಲ್ಕ ಮತ್ತು ಘಟಿಕೋತ್ಸವ ಶುಲ್ಕಗಳ ಅಸಮರ್ಪಕ ಹೆಚ್ಚಳದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕುಲಪತಿ, ಕುಲಸಚಿವ ಮತ್ತು ರಿಜಿಸ್ಟ್ರಾರ್ರನ್ನು ವಜಾ ಮಾಡಿ ದಕ್ಷ ಅಧಿಕಾರಿಗಳನ್ನು ನೇಮಿಸುವಂತೆ ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.