ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ – Kannada News

ಕುವೈತ್, ಜೂನ್ 03: ಕೆಶ್ಮ್​ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್(Iran) ಕುವೈತ್ ಹಾಗೂ ಬಹ್ರೇನ್​ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪರ್ಷಿಯನ್ ಕೊಲ್ಲಿ ವಲಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ನಾಗರಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಕುವೈತ್ ಮತ್ತು ಬಹ್ರೇನ್ ಸರ್ಕಾರಗಳು ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ಬುಧವಾರ ಮುಂಜಾನೆ ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್‌ನ ಸಶಸ್ತ್ರ ಪಡೆಗಳು (IRIB) ಹೇಳಿಕೊಂಡ ಬೆನ್ನಲ್ಲೇ, ಅಮೆರಿಕ ಸೇನೆಯು ಈ ಎಲ್ಲ ವರದಿಗಳನ್ನು ತಳ್ಳಿ ಹಾಕಿದೆ.

ಅಮೆರಿಕವು ವಾರಾಂತ್ಯದಲ್ಲಿ ಇರಾನ್‌ನ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿದ್ದು, ಅದಕ್ಕೆ ಪ್ರತಿಯಾಗಿ ಅಮೆರಿಕದ ನೆಲೆಯೊಂದನ್ನು ಗುರಿಯಾಗಿಸಿಕೊಂಡಿರುವುದಾಗಿ ತೆಹ್ರಾನ್ ಹೇಳಿದೆ. ಇದರಿಂದ ಹೋರ್ಮುಜ್ ಜಲಸಂಧಿಯ ಸುತ್ತ ಒಂದು ವಾರದೊಳಗೆ ಮೂರನೇ ಬಾರಿ ಉದ್ವಿಗ್ನತೆ ಹೆಚ್ಚಾಗಿದೆ. ಅಮೆರಿಕದ ಕೇಂದ್ರ ಕಮಾಂಡ್, ಅಂತಾರಾಷ್ಟ್ರೀಯ ಜಲಪ್ರದೇಶದ ಮೇಲೆ ಅಮೆರಿಕದ ಡ್ರೋನ್ ಅನ್ನು ಹೊಡೆದುರುಳಿಸುವುದನ್ನು ಒಳಗೊಂಡ ಇರಾನ್‌ನ ಕ್ರಮಗಳ ನಂತರ “ಸ್ವಯಂರಕ್ಷಣಾತ್ಮಕ ದಾಳಿಗಳನ್ನು” ನಡೆಸಿರುವುದಾಗಿ ತಿಳಿಸಿದೆ.

ಬುಧವಾರ ಮುಂಜಾನೆ ಕುವೈತ್‌ನಾದ್ಯಂತ ಜೋರಾದ ಸ್ಫೋಟದ ಶಬ್ದಗಳು ಕೇಳಿಬಂದಾಗ ಕುವೈತ್ ಸೇನೆಯು ತಕ್ಷಣವೇ ಕಾರ್ಯಪ್ರವೃತ್ತವಾಯಿತು. ಕುವೈತ್ ಸೇನೆಯ ಜನರಲ್ ಸ್ಟಾಫ್ ನೀಡಿರುವ ಮಾಹಿತಿ ಪ್ರಕಾರ, ದೇಶದ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳು (Air Defence Systems) ಅತ್ಯಂತ ಯಶಸ್ವಿಯಾಗಿ ವಾಯುಗಡಿಗೆ ನುಗ್ಗಿದ ಪ್ರತಿಕೂಲ ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ತಡೆದು ಹೊಡೆದುರುಳಿಸಿವೆ ಎಂದು ಅಮೆರಿಕ ಹೇಳಿದೆ.

ಮತ್ತಷ್ಟು ಓದಿ: ಇರಾನ್ ಮೇಲೆ ಮತ್ತೆ ಅಮೆರಿಕದ ‘ಆತ್ಮರಕ್ಷಣಾ ದಾಳಿ’: ಸೈನಿಕರು ಸುರಕ್ಷಿತ

ರಕ್ಷಣಾ ಸಚಿವಾಲಯದ ಅಧಿಕೃತ ವಕ್ತಾರ ಕರ್ನಲ್ ಸೌದ್ ಅಬ್ದುಲಜೀಜ್ ಅಲ್-ಒತೈಬಿ ಅವರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದು, ವಾಯು ರಕ್ಷಣಾ ಪಡೆಗಳು ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣದಲ್ಲಿಟ್ಟುಕೊಂಡಿವೆ ಎಂದು ತಿಳಿಸಿದ್ದಾರೆ.

ವಿಡಿಯೋ

ಆಕಾಶದಲ್ಲಿ ಕ್ಷಿಪಣಿಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದಾಗ ಬಿದ್ದಿರಬಹುದಾದ ಭಗ್ನಾವಶೇಷಗಳು ಅಥವಾ ಚೂರುಗಳನ್ನು ನಾಗರಿಕರು ಮುಟ್ಟಬಾರದು ಮತ್ತು ಯಾವುದೇ ಅನುಮಾನಾಸ್ಪದ ವಸ್ತು ಕಂಡರೆ ತಕ್ಷಣವೇ ತುರ್ತು ಸೇವೆಗಳ ‘112’ ಹಾಟ್‌ಲೈನ್‌ಗೆ ತಿಳಿಸಬೇಕು ಎಂದು ಸೇನೆ ವಿನಂತಿಸಿದೆ. ಸರ್ಕಾರದ ಈ ತ್ವರಿತ ಸಂವಹನದಿಂದಾಗಿ ಸಾರ್ವಜನಿಕ ವಲಯದಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗದೆ ಶಾಂತಿ ನೆಲೆಸಿದೆ.

ಇರಾನ್‌ನ ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಪಡೆ (IRGC), ದಕ್ಷಿಣ ಇರಾನ್ ಮೇಲಿನ ಹಿಂದಿನ ದಾಳಿಗೆ ಪ್ರತೀಕಾರವಾಗಿ ಅಮೆರಿಕದ ಪಡೆಗಳು ಬಳಸುತ್ತಿದ್ದ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿದೆ. ಇದೇ ವೇಳೆ, ಈ ಸಂಘರ್ಷದ ಸಂದರ್ಭದಲ್ಲಿ ತನ್ನ ವಾಯು ರಕ್ಷಣಾ ವ್ಯವಸ್ಥೆಗಳು ಶತ್ರು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತಡೆದಿರುವುದಾಗಿ ಕುವೈತ್ ತಿಳಿಸಿದೆ. ಹಲವು ತಿಂಗಳುಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿದ್ದ ಮಾತುಕತೆಗಳು ವಾರಾಂತ್ಯದಲ್ಲಿ ಸ್ಥಗಿತಗೊಂಡ ಸಂದರ್ಭದಲ್ಲೇ ಈ ಇತ್ತೀಚಿನ ದಾಳಿಗಳು ನಡೆದಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *