ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕಿರುಕುಳ
ತುಮಕೂರು, ಜೂ.23: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಇದೀಗ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆಯ (Women Safety) ಕುರಿತು ಆತಂಕ ಮೂಡಿಸುವ ಘಟನೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಸೋಲೂರು ಬಳಿ ನಡೆದ ಘಟನೆಯೊಂದು ಭಾರೀ ವೈರಲ್ ಆಗಿತ್ತು. ಈಗ ಅದರ ಬೆನ್ನಲ್ಲೇ ಕುಣಿಗಲ್ನ ಬಿಲಿದೇವಾಲಯದ (Bilidevalaya) ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆಸಾಮಿಗೆ ಸಹಪ್ರಯಾಣಿಕರು ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ @Karnataka Portfolio ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವರದಿಗಳ ಪ್ರಕಾರ, ಆರೋಪಿ ತಾನು ಸಾರಿಗೆ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿ ನಿರ್ವಾಹಕನನ್ನು (Conductor) ದಾರಿ ತಪ್ಪಿಸಿ ಬಸ್ ಹತ್ತಿದ್ದ ಎನ್ನಲಾಗಿದೆ. ಬಸ್ ಚಲಿಸುತ್ತಿದ್ದಂತೆ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಜೊತೆ ಈತ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆರೋಪಿಯ ಈ ಅಸಭ್ಯ ವರ್ತನೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಮಹಿಳೆ ಮತ್ತು ಬಸ್‌ನಲ್ಲಿದ್ದ ಇತರೆ ಪ್ರಯಾಣಿಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಲ್ಲಿದೆ ನೋಡಿ ಸ್ಟೋರಿ:
Women Still Unsafe on Buses?
Even if people like this are beaten with slippers, they still do not seem to learn their lesson. Day by day, such incidents are increasing on public buses, making passengers especially women feel unsafe while travelling. In this incident, a man… pic.twitter.com/2inlJPy1bV
— Karnataka Portfolio (@karnatakaportf) June 23, 2026
ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಕಿರುಕುಳ ನೀಡಿದ ವ್ಯಕ್ತಿಗೆ ಪ್ರಯಾಣಿಕರು ಬಸ್‌ನೊಳಗೇ ಚಪ್ಪಲಿಯಿಂದ ಧರ್ಮದೇಟು ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಆರೋಪಿಯು ಬಸ್‌ನಿಂದ ಇಳಿದು ತಪ್ಪಿಸಿಕೊಳ್ಳಲು (Escape) ಯತ್ನಿಸಿದ್ದಾನೆ. ಆದರೆ, ಕಿರುಕುಳಕ್ಕೊಳಗಾದ ಮಹಿಳೆಯ ಪತಿ ತಕ್ಷಣ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ!
ಇಂತಹ ಘಟನೆಗಳು ಸಮಾಜ ತಲೆತಗ್ಗಿಸುವಂತೆ ಮಾಡಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮಹಿಳೆಯರ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ. “ಇಂತಹ ವಿಕೃತ ಮನಸ್ಸುಗಳ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಸಾರಿಗೆ ಸಂಸ್ಥೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆಗ ಮಾತ್ರ ಇತರರಿಗೆ ಇದೊಂದು ಪಾಠವಾಗಲಿದ್ದು, ಬಸ್‌ಗಳಲ್ಲಿ ಮಹಿಳೆಯರು ನಿರ್ಭೀತಿಯಿಂದ ಪ್ರಯಾಣಿಸಲು ಸಾಧ್ಯವಾಗುತ್ತದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 3:04 pm, Tue, 23 June 26