ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ – Kannada News | KS Eshwarappa receives Life threat call from abroad, Case Book

ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರಿಗೆ ಪೊಲೀಸ್ ಭದ್ರತೆ ಹಾಗೂ ಎಸ್ಕಾರ್ಟ್ ವ್ಯವಸ್ಥೆ ಒದಗಿಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ ಎಸ್ಕಾರ್ಟ್ ಹಾಗೂ ಪೊಲೀಸ್ ಭದ್ರತೆಯನ್ನು ಹಿಂಪಡೆದಿತ್ತು . ಇದೀಗ ಮತ್ತೆ ತಮಗೆ Y ಸೆಕ್ಯೂರಿಟಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *