Headlines

ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ – Kannada News

ಬೆಂಗಳೂರು, (ಜೂನ್ 03): ಸಚಿವ ಸ್ಥಾನ ಆಸೆ ಈಡೇರದಿದ್ದರೂ ಸಹ ಬಿಕೆ ಹರಿಪ್ರಸಾದ್​​​ಗೆ (BK Hariprasad) ಎರಡೆರಡು ಹುದ್ದೆಗು ಒದಗಿ ಬಂದಿವೆ. ವಿಧಾನ ಪರಿಷತ್​​​ಗೆ ಮತ್ತೊಮ್ಮೆ ಹರಿಪ್ರಸಾದ್​​ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಇದರ ಜೊತೆ ಕೆಪಿಸಿಸಿ (KPCC President)  ಪಟ್ಟವನ್ನು ಕಟ್ಟಿದೆ. ಹೌದು….ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು ಈ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ಹೆಸರು ಘೋಷಣೆ
  • ಡಿಕೆ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ
  • ಕೆಪಿಸಿಸಿ ಅಧ್ಯಕ್ಷರಾಗಿ ಬಿ‌.ಕೆ‌.ಹರಿಪ್ರಸಾದ್ ನೇಮಿಸಿದ ಎಐಸಿಸಿ
  • ಒಬಿಸಿ ಸಮುದಾಯದ ನಾಯಕನಿಗೆ ಮಣೆ ಹಾಕಿದ ಎಐಸಿಸಿ

ಸಚಿವ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷ ಹುದ್ದೆ ಎರಡರ ಮೇಲೂ ಕಣ್ಣಿಟ್ಟಿದ್ದ ಸತೀಶ್‌ ಜಾರಕಿಹೊಳಿಯವರಿಗೆ ಹೈಕಮಾಂಡ್‌ ಶಾಕ್‌ ನೀಡಿದ್ದು, ಸಚಿವ ಸ್ಥಾನಕ್ಕೆ ಸಿಮಿತಗೊಳಿಸಿದೆ. ಕೆಪಿಸಿಸಿ ಸಾರಥ್ಯವನ್ನು ಬಿ.ಕೆ. ಹರಿಪ್ರಸಾದ್‌ ಅವರ ಹೆಗಲಿಗೆ ಹೊರಿಸಿದೆ. ಇನ್ನು ಬಿಕೆ ಹರಿ ಪ್ರಸಾದ್ ಸಹ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅವರಿಗೆ ಡಿಕೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್  ನಿರ್ಧಾರ ಬದಲಿಸಿದ್ದು, ವಿಧಾನಪರಿಷತ್ ಜೊತೆಗೆ ಕೆಪಿಸಿಸಿ ಪಟ್ಟವನ್ನು ಕಟ್ಟಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ?

ಕಳೆದ ಆರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿಕೆ ಶಿವಕುಮಾರ್ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಈಗ ಅನುಭವಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತರಲಾಗಿದೆ.

Source link

Leave a Reply

Your email address will not be published. Required fields are marked *