ಶಿವಮೊಗ್ಗ, ಮೇ 09: ಕೆರೆಯ ಏರಿ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಸಿದ್ದಾಪುರದಿಂದ ಹಾನಗಲ್ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದೆ. ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ. ಅದೇಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಮೂವರು ಗಂಬೀರ ಗಾಯಗೊಂಡಿದ್ದಾರೆ. ಬಸ್ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.