ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
