ತಿರುವನಂತಪುರ, (ಮೇ 14): ಕೇರಳಂ ಮುಖ್ಯಮಂತ್ರಿ (Kerala CM) ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿದ್ದ ಆಂತರಿಕ ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು, ಅಂತಿಮವಾಗಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ (VD Satheesan) ಅವರನ್ನ ಆಯ್ಕೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್ನಲ್ಲಿದ್ದವು. ಆದ್ರೆ, ಹೈಕಮಾಂಡ್ ನಾನಾ ಲೆಕ್ಕಾಚಾರಗಳನ್ನು ಹಾಕಿ ಅಂತಿಮವಾಗಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಆಪ್ತರಾಗಿರುವ ವೇಣುಗೋಪಾಲ್ ಅವರನ್ನು ಬಿಟ್ಟು ಸತೀಶನ್ ಅವರನ್ನೇ ಸಿಎಂ ಆಗಿ ಆಯ್ಕೆ ಮಾಡಿದ್ಯಾಕೆ? ಇದರ ಹಿಂದನ ಕಾರಣಗಳೇನು ಎನ್ನುವುದನ್ನು ತಿಳಿಯಿರಿ.
