ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ನವದೆಹಲಿ, ಮಾರ್ಚ್ 21: ಕೇರಳ ವಿಧಾನಸಭಾ ಚುನಾವಣೆಗೆ (Kerala Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನೇತೃತ್ವದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 18ರಂದು ಸಭೆ ಸೇರಿ ಪಟ್ಟಿಗಳನ್ನು ಬಿಡುಗಡೆ ಮಾಡಿತು. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಭೆಯಲ್ಲಿ ಹಾಜರಿದ್ದರು.

ಮಾರ್ಚ್ 16ರಂದು ಬಿಜೆಪಿ ಕೇರಳದ ಮೊದಲ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ನಂತರ ಮಾರ್ಚ್ 19ರಂದು 39 ಹೆಸರುಗಳನ್ನು ಒಳಗೊಂಡ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಇದುವರೆಗೆ ಬಿಜೆಪಿ 97 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಇದನ್ನೂ ಓದಿ: ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಇಂದು ಘೋಷಿಸಲಾದ ಬಿಜೆಪಿಯ ಪಟ್ಟಿಯ ಪ್ರಕಾರ, ಬಿಜೆಪಿ ತಿರುವನಂತಪುರಂನಿಂದ ಜಿಲ್ಲಾಧ್ಯಕ್ಷ ಕರಮಣ ಜಯನ್ ಅವರನ್ನು ಕಣಕ್ಕಿಳಿಸಿದೆ. ಅವರು ಎಲ್‌ಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಟ ಸುಧೀರ್ ಕರಮಣ ಮತ್ತು ಯುಡಿಎಫ್ ನಾಯಕ ಸಿ.ಪಿ ಜಾನ್ ಅವರನ್ನು ಎದುರಿಸಲಿದ್ದಾರೆ. ಎಲ್‌ಡಿಎಫ್ ಮಿತ್ರ ಪಕ್ಷವಾದ ಜನಾಧಿಪತ್ಯ ಕೇರಳ ಕಾಂಗ್ರೆಸ್ (ಜೆಕೆಸಿ)ನ ಹಾಲಿ ಶಾಸಕ ಆಂಥೋನಿ ರಾಜು ಅವರನ್ನು ಸಾಕ್ಷ್ಯ ತಿರುಚುವ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಯಿತು.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ಉದ್ಯಮಿ ಎಸ್ ರಾಜಶೇಖರನ್ ನಾಯರ್ ಅವರನ್ನು ನೆಯ್ಯಟ್ಟಿಂಕರದಿಂದ ಕಣಕ್ಕಿಳಿಸಲಾಗಿದೆ. ಇದಕ್ಕೂ ಮೊದಲು, 2021ರಲ್ಲಿ ಅವರು ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ನಟ ವಿವೇಕ್ ಗೋಪನ್ ಅವರನ್ನು ಪುತ್ತುಪ್ಪಳ್ಳಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಎಲ್ಲಾ 140 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *