ಮಡಿಕೇರಿ, ಆಗಸ್ಟ್ 02: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಡಿಕೇರಿ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಭಾಗಮಂಡಲ ಗ್ರಾಮ ಕೇಂದ್ರ ಸಂಪೂರ್ಣವಾಗಿ ಜಲಾವೃತವಾಗಿದೆ. ತ್ರಿವೇಣಿ ಸಂಗಮವು ಸಂಪೂರ್ಣವಾಗಿ ನೀರಿನಿಂದ ಆವೃತಗೊಂಡಿದ್ದು, ಸಂಗಮದ ಪಕ್ಕದಲ್ಲಿರುವ ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ಸಹ ಮುಳುಗಡೆಯಾಗಿವೆ. ಮಳೆಯ ತೀವ್ರತೆಗೆ ಭಾಗಮಂಡಲ-ತಲಕಾವೇರಿ ಮಾರ್ಗದ ರಸ್ತೆಯು ಸಹ ನೀರಿನಿಂದ ಆವರಿಸಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈ ಓವರ್ ಮೂಲಕ ಓಡಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.