ಕೊಪ್ಪಳ, ಜುಲೈ 10: ನಗರದಲ್ಲಿ ಸಾವಿರಾರು ಬಿಸಿಯೂಟ ತಯಾರಕಾ ಮಹಿಳೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ ಮಾಡಿದರು. ಸಿಐಟಿಯು ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದು, ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ವೇತನ ಹೆಚ್ಚಳ ಮಾಡಬೇಕು ಎಂಬುವುದು ಅವರ ಪ್ರಮುಖ ಆಗ್ರಹವಾಗಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಜಿಲ್ಲಾಡಳಿತ ಭವನದ ಆವರಣವನ್ನು ಪ್ರವೇಶಿಸಲು ಯತ್ನಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ, ಪ್ರತಿಭಟನೆಯ ಮುಂಚೂಣಿ ನಾಯಕರನ್ನು ವಶಕ್ಕೆ ಪಡೆದರು. ಸರ್ಕಾರವು ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
