ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು – Kannada News | Three Dead and Six Injured as Truck Crosses Divider and Hits Omni on NH 63 Near Bhanapur in Koppal

ಕೊಪ್ಪಳ, ಜೂನ್ 27: ಕೊಪ್ಪಳ (Koppal) ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನವೊಂದು ನಿಯಂತ್ರಣ ತಪ್ಪಿ, ಏಕಾಏಕಿ ಡಿವೈಡರ್ ದಾಟಿ ಬಂದು ಎದುರಿನಿಂದ ಬರುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ಓಮಿನಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇಬ್ಬರ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಅಪಘಾತದಲ್ಲಿ ಹಾವೇರಿ ಮೂಲದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25) ಹಾಗೂ ರಮೇಶ್ ಬಳ್ಳಾರಿ (45) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಕಾರಿನಲ್ಲಿದ್ದ ಉಳಿದ ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಇವರಲ್ಲಿ ಇಬ್ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗಿದೆ.

ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *