
ಬೆಂಗಳೂರು, ಮಾರ್ಚ್ 27: ಗಲ್ಫ್ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು. ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.