
ಜಬಲ್ಪುರ, ಮೇ 22: ರೂಪದರ್ಶಿ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಸಾವಿನ ಬಳಿಕ ಅವರ ಗಂಡ ಸಮರ್ಥ್ ಸಿಂಗ್ ತಲೆಮರೆಸಿಕೊಂಡಿದ್ದರು. 10 ದಿನಗಳ ಬಳಿಕ ಇಂದು ಅವರು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹಾಗೇ, ಅವರ ಬಾರ್ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಲು ಅನುಮತಿ ಕೋರಿ ಸಮರ್ಥ್ ಸಿಂಗ್ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಮರ್ಥ್ ಸಿಂಗ್ ಅವರನ್ನು ವಿವಾಹವಾಗಿದ್ದ ತ್ವಿಶಾ ಶರ್ಮಾ ಮೇ 12ರಂದು ಭೋಪಾಲ್‌ನಲ್ಲಿರುವ ಗಂಡನ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಆಕೆಯ ಗಂಡನ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ