Headlines

ಕೋಲಾರದಲ್ಲಿ ವಾಹನಗಳನ್ನು ತಡೆದು, ರಸ್ತೆ ಬಂದ್​ ಮಾಡಿ ಮಾವು ಬೆಳೆಗಾರರ ಪ್ರತಿಭಟನೆ! – Kannada News | Mango Growers Demand Support Price Amidst Widespread Protests

ಕೋಲಾರ, ಜೂನ್ 22: ಮಾವಿನ ಹಣ್ಣಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕೋಲಾರ ಜಿಲ್ಲೆಯಲ್ಲಿಂದು ಮಾವು ಬೆಳೆಗಾರರು ‘ಕೋಲಾರ ಬಂದ್’ಗೆ ಕರೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಟನ್ ಮಾವಿಗೆ 3,000 ರಿಂದ 4,000 ರೂ. ಮಾತ್ರ ದೊರೆಯುತ್ತಿದ್ದು, ಇದು ರೈತರಿಗೆ ದೊಡ್ಡ ನಷ್ಟ ಉಂಟುಮಾಡುತ್ತಿದೆ. ಮಾವು ಬೆಳೆಗಾರರ ಸಂಘ ಹಾಗೂ ಇತರೆ ಸಂಘಟನೆಗಳು ಸರ್ಕಾರ ಕನಿಷ್ಠ 8,000 ರೂ.ನಿಂದ 10,000 ರೂ. ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಆಗ್ರಹಿಸಿವೆ.

ಮುಂಜಾನೆಯಿಂದಲೇ ಕೋಲಾರ, ಶ್ರೀನಿವಾಸಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರು ರಸ್ತೆ ತಡೆದು, ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಸಂಚಾರವೂ ಬಂದ್ ಆಗಿದ್ದು, ಶ್ರೀನಿವಾಸಪುರ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಳೆದ ವರ್ಷವೂ ಮಾವು ಬೆಳೆಗಾರರು ಇದೇ ರೀತಿಯ ನಷ್ಟ ಅನುಭವಿಸಿದ್ದು, ಈ ವರ್ಷವೂ ಪರಿಸ್ಥಿತಿ ಪುನರಾವರ್ತನೆಯಾಗಿದೆ. ಸರ್ಕಾರ ರೈತರ ನೆರವಿಗೆ ನಿಲ್ಲಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *