ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆImage Credit source: Google
ಕೋಲಾರ, ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು ಸೇರಿ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 16 ಎಕರೆ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗಿದೆ. ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್ಗಳನ್ನು ಮೊದಲ ಹಂತದಲ್ಲಿ ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್ಗಳು ಇಲ್ಲಿ ತಯಾರಾಗಲಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಪ್ಲ್ಯಾನ್ ಸಿದ್ಧವಾಗಿರುವ ಮಾಹಿತಿ ಇದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ.)