ಕನ್ನಡ ಚಿತ್ರರಂಗದ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಅಂತರರಾಷ್ಟ್ರೀಯ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ಯಶ್, ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ‘ಸ್ಯಾನ್ ಡಿಯಾಗೋ ಕಾಮಿಕ್ ಕಾನ್’ (San Diego Comic-Con) ಈವೆಂಟ್ನಲ್ಲಿ ಭಾಗಿಯಾಗಿದ್ದಾರೆ. ಈ ವೇದಿಕೆಯಲ್ಲಿ ಯಶ್ ಅವರು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ನೂರಾರು ಭಾರತೀಯ ಮತ್ತು ಜಾಗತಿಕ ಅಭಿಮಾನಿಗಳಲ್ಲಿ ಭಾರಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ.
ವೇದಿಕೆಯ ಮುಂಭಾಗದಲ್ಲಿ ನೆರೆದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದ್ದಲ್ಲದೆ, ಅವರೊಂದಿಗೆ ಸೆಲ್ಫಿ ಪಡೆದುಕೊಳ್ಳಲು ಮುಗಿಬಿದ್ದ ದೃಶ್ಯಗಳು ವೀಡಿಯೊದಲ್ಲಿ ಸೆರೆಯಾಗಿವೆ. ಅಲ್ಲಿದ್ದವರೆಲ್ಲರೂ ತಮ್ಮ ಮೊಬೈಲ್ ಕ್ಯಾಮೆರಾಗಳನ್ನು ಆನ್ ಮಾಡಿ ಯಶ್ ಅವರ ಫೋಟೋ ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ತೀವ್ರ ಉತ್ಸಾಹ ತೋರಿದ್ದಾರೆ.
ಸದ್ದು ಮಾಡಿದ ‘ಡ್ಯಾಡಿಸ್ ಹೋಂ’ ಡೈಲಾಗ್
ಈ ಜಾಗತಿಕ ವೇದಿಕೆಯಲ್ಲಿ ಯಶ್ ಭಾಗವಹಿಸಿರುವುದು ಕೇವಲ ‘ರಾಮಾಯಣ’ ಚಿತ್ರದ ಪ್ರಚಾರಕ್ಕಾಗಿ. ಆದರೆ, ಈ ವೇದಿಕೆ ಮೇಲೆ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರ ಹೈಪ್ ಸೃಷ್ಟಿಸಿದೆ.
.#Daddy‘s #Home is no longer a chant. It’s a travel companion. From #Delhi to #ComicCon , it keeps showing up before @TheNameIsYash does.
The internet’s favourite soundtrack is officially following him everywhere. #August26 can’t come soon enough.#Yash @toxicthemovie #ComicCon pic.twitter.com/EzmISC2kvI— A Sharadhaa (@sharadasrinidhi) July 24, 2026

ಈ ಕಾರ್ಯಕ್ರಮದ ಸಂದರ್ಭದಲ್ಲಿ ಯಶ್ ಅವರ ‘ಟಾಕ್ಸಿಕ್’ ಸಿನಿಮಾದ ಸೂಪರ್ ಹಿಟ್ ಡೈಲಾಗ್ ಆದ ‘ಡ್ಯಾಡಿಸ್ ಹೋಂ’ 2ಎಂಬ ಒನ್-ಲೈನರ್ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಭಿಮಾನಿಗಳ ವಲಯದಲ್ಲಿ ಮತ್ತೆ ಜೋರಾಗಿ ಸದ್ದು ಮಾಡುತ್ತಿದೆ. ರಾಕಿ ಭಾಯ್ ಅವರ ಜಾಗತಿಕ ಮಟ್ಟದ ಈ ಕ್ರೇಜ್ ನೋಡಿ ಕನ್ನಡ ಚಿತ್ರರಂಗ ಹಾಗೂ ಅವರ ಅಭಿಮಾನಿಗಳು ಮತ್ತೊಮ್ಮೆ ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರ್ಮಾಪಕ ಕೆವಿಎನ್ ಹೇಳಿದ್ದೇನು?
‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಯಶ್ ನಿರ್ಮಾಪಕ ಕೂಡ ಹೌದು. ಗೀತು ಮೋಹನ್ದಾಸ್ ಅವರ ನಿರ್ಮಾಣ ಚಿತ್ರಕ್ಕೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.