
ನೆಲಮಂಗಲ, ಮಾರ್ಚ್ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮಾಚೋಹಳ್ಳಿಯಲ್ಲಿ ನವೀನ್ ಎಂಬುವವರು ತಮ್ಮ ಪತ್ನಿ ಹಾಗೂ ತಾಯಿಯೊಂದಿಗೆ ವಾಸವಿದ್ದಾರೆ. ಪತ್ನಿ ಬಾಣಂತಿ ಆಗಿದ್ದರಿಂದ ಕಳೆದ ಎರಡು ದಿನದ ಹಿಂದೆ ತವರು ಮನೆಗೆ ತೆರಳಿದ್ದರು. ಈ ಮಧ್ಯೆ ಮಗುವಾಗಿದೆ. ಹೀಗಾಗಿ ಹೆಂಡತಿ ಹಾಗೂ ಮಗುವನ್ನ ನೊಡಿ ಬರಲು ನವೀನ್ ತಮ್ಮ ತಾಯಿ ಜೊತೆಗೆ ತೆರಳಿದ್ದಾರೆ.
ಬರೋಬ್ಬರಿ 10 ಲಕ್ಷ ರೂ ಬೆಲೆಬಾಳುವ ಚಿನ್ನಾಭರಣ ಕಳ್ಳತನ
ಅತ್ತ ನವೀನ್ ಹೋಗುತ್ತಿದ್ದಂತೆ ಹೊಂಚು ಹಾಕಿ ಕುಳಿತ್ತಿದ್ದ ಖದೀಮರು ತಮ್ಮ ಕೈಚಳಕ ತೋರಿದ್ದಾರೆ. ಮನೆ ಬಾಗಿಲು ಮುರಿದು ಒಳಹೊಕ್ಕ ಕಳ್ಳರು ನಗದು ಸೇರಿದಂತೆ ಬರೋಬ್ಬರಿ 10 ಲಕ್ಷ ರೂ ಬೆಲೆಬಾಳುವ ಚಿನ್ನಾಭರಣ ಎಗರಿಸಿ ಪರಾರಿ ಆಗಿದ್ದಾರೆ. ನವೀನ್ ತಮ್ಮ ಹೆಂಡತಿ ಊರಿಗೆ ತೆರಳಿದ 24 ಗಂಟೆಯೊಳಗೆ ಅನಾಹುತ ನಡೆದಿದೆ.
ಇದನ್ನೂ ಓದಿ: ಈಗ ಗ್ಯಾಸ್ ಸಿಲಿಂಡರ್ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು
ಇನ್ನು ಮನೆ ಎದುರಿನ ನಿವಾಸಿ ಸಿಸಿಟಿವಿ ಮುರಿದು ಹೋಗಿರುವುದನ್ನ ಗಮನಿಸಿ ನವೀನ್ಗೆ ಕರೆ ಮಾಡಿದ್ದಾರೆ. ಈ ವೇಳೆ ವಿಡಿಯೋಕಾಲ್ ಮೂಲಕ ನೋಡಿದಾಗ ಮನೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಇನ್ನು ಘಟನೆ ಸಂಬಂಧ ಅಪರಿಚಿತ ವ್ಯಕ್ತಿಗಳು ಮನೆ ಮುಂದೆ ಓಡಾಡಿರುವ ಪತ್ತೆ ಆಗಿದೆ. ಬೆಳಿಗ್ಗೆ ಮನೆ ಮುಂದೆ ಮೂವರು ಅಪರಿಚಿತ ಓಡಾಡಿದ್ದು, ರಾತ್ರಿ ಕಳ್ಳತನ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.