ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಗೃಹ ಸಚಿವ ಅಮಿತ್ ಶಾ – Kannada News | Home Minister Amit Shah reviewing security with SPs from border districts

ನವದೆಹಲಿ, ಜುಲೈ 9: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ನವದೆಹಲಿಯಲ್ಲಿ ಗಡಿ ಜಿಲ್ಲೆಗಳ 119 ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್‌ಪಿ) ಜೊತೆ ಮಹತ್ವದ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ಗಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೂ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

ಸೂಕ್ಷ್ಮ ಗಡಿ ಪ್ರದೇಶಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವ ಮೂಲಕ ಮತ್ತು ಕಾನೂನು ಜಾರಿಯನ್ನು ಸುಧಾರಿಸುವ ಕ್ರಮಗಳನ್ನು ಗುರುತಿಸುವ ಮೂಲಕ ದೇಶದ ಗಡಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಸಭೆಯಲ್ಲಿ ಅಮಿತ್ ಶಾ ಸೂಚಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *