Headlines

ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ, ಮಗು ಎರಡು ತುಂಡಾಯ್ತು, ತಲೆ ಗರ್ಭದಲ್ಲೇ ಉಳೀತು – Kannada News | Ambulance Delivery Horror: Baby Decapitated in UP Due to ASHA worker’s Negligence

ಮಗು-ಸಾಂದರ್ಭಿಕ ಚಿತ್ರImage Credit source: Daily Mom

ಬಸ್ತಿ, ಏಪ್ರಿಲ್ 14: ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಹ, ಮನುಕುಲವೇ ಬೆಚ್ಚಿಬೀಳುವಂತಹ ಘೋರ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿ(Mother)ಯ ಗರ್ಭದಲ್ಲೇ ಉಳಿದ ಭೀಕರ ಘಟನೆ ವರದಿಯಾಗಿದೆ.

ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ತಲುಪಲು ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಾಗ, ಮಹಿಳೆಯ ನೋವು ತೀವ್ರಗೊಂಡಿದೆ.

ಆಂಬ್ಯುಲೆನ್ಸ್‌ನಲ್ಲಿದ್ದ ಆಶಾ ಕಾರ್ಯಕರ್ತೆ, ವೈದ್ಯರಿಗಾಗಿ ಕಾಯುವ ಬದಲು ತಾನೇ ಹೆರಿಗೆ ಮಾಡಿಸಲು ಮುಂದಾಗಿದ್ದಾಳೆ. ಮಹಿಳೆಗೆ ನೋವು ನಿವಾರಕ ಇಂಜೆಕ್ಷನ್ ನೀಡಿ, ಬಲವಂತವಾಗಿ ಸಾಮಾನ್ಯ ಹೆರಿಗೆ (Normal Delivery) ಮಾಡಲು ಪ್ರಯತ್ನಿಸಿದ್ದಾಳೆ. ಈ ಸಂದರ್ಭದಲ್ಲಿ ಮಗುವಿನ ದೇಹ ಹೊರಬಂದರೂ, ತಲೆ ಮಾತ್ರ ಗರ್ಭದ ಒಳಗೇ ಸಿಲುಕಿಕೊಂಡಿದೆ. ಸಿಬ್ಬಂದಿ ಬಲವಂತವಾಗಿ ಎಳೆದ ಪರಿಣಾಮ, ಮಗುವಿನ ದೇಹ ಮತ್ತು ತಲೆ ಬೇರ್ಪಟ್ಟು, ದೇಹ ಮಾತ್ರ ಕೈಗೆ ಬಂದಿದೆ!

ತಮ್ಮ ತಪ್ಪಿನಿಂದ ಮಗು ಸಾವನ್ನಪ್ಪಿದ್ದನ್ನು ಕಂಡು ಭಯಭೀತರಾದ ಆರೋಗ್ಯ ಕಾರ್ಯಕರ್ತರು, ಸತ್ಯವನ್ನು ಮರೆಮಾಚಿ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲಿಂದ ಅವರನ್ನು ಜಿಲ್ಲಾ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು.

ಮತ್ತಷ್ಟು ಓದಿ:

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ

ಜಿಲ್ಲಾಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಮಾಡಿದ ವೈದ್ಯರು ದಂಗಾಗಿ ಹೋಗಿದ್ದಾರೆ. ತಾಯಿಯ ಗರ್ಭದೊಳಗೆ ಮಗುವಿನ ಕತ್ತರಿಸಿದ ತಲೆ ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಯನ್ನು ಹೊರತೆಗೆದಿದ್ದಾರೆ. ಅದೃಷ್ಟವಶಾತ್ ತಾಯಿ ಪ್ರಸ್ತುತ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಆದರೆ, ಇಷ್ಟು ದೊಡ್ಡ ಅನಾಹುತ ನಡೆದರೂ ಜಿಲ್ಲಾಡಳಿತ ಮಾತ್ರ ಇನ್ನೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 2:14 pm, Tue, 14 April 26

Source link

Leave a Reply

Your email address will not be published. Required fields are marked *