ನವದೆಹಲಿ, ಜೂನ್ 5: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪರಿಸರವನ್ನು ರಕ್ಷಿಸಲು ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ” ಎಂದು ಬರೆದುಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
