ಶ್ರೀನಗರ, ಮೇ 25: ಇಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನಪ್ರಿಯ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿರುವ ಗೊಂಡೊಲಾ ಕೇಬಲ್ ಕಾರ್ ಸೇವೆಯಲ್ಲಿ ತಾಂತ್ರಿಕ ದೋಷ ಸಂಭವಿಸಿದೆ. ಆದರೆ, ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಇದರಿಂದಾಗಿ ಸುಮಾರು 300 ಪ್ರವಾಸಿಗರು ಕೇಬಲ್ ಕಾರ್ಗಳಲ್ಲಿ ಸಿಲುಕಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಗೊಂಡೊಲಾ ಸೇವೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
