ಗೃಹಲಕ್ಷ್ಮಿ ಯೋಜನೆಯಲ್ಲಿ ‘ಗೋಲ್‌ಮಾಲ್’; ಗ್ಯಾರಂಟಿ ಸಮಿತಿ ಅಧ್ಯಕ್ಷರ ವಿಡಿಯೋ ವೈರಲ್! – Kannada News | Gruha Lakshmi Scheme Scam: Koppal Guarantee Committee Chairman Admits Money Transferred to Deceased Accounts

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ

ಕೊಪ್ಪಳ, ಆಗಸ್ಟ್ 09: ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿರುವ ಮತ್ತು ಅದನ್ನು ರಿಕವರಿ ಮಾಡುತ್ತಿರುವ ವಿಚಾರ ದೊಡ್ಡ ವಿವಾದ ಸೃಷ್ಟಿಸುತ್ತಿದ್ದಂತೆಯೇ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಬಿಡುಗಡೆ ಮಾಡಿರುವ ಮತ್ತೊಂದು ವಿಡಿಯೋ ಭಾರಿ ಸಂಚಲನ ಮೂಡಿಸಿದೆ.

ಶ್ರೀನಿವಾಸ್ ರೆಡ್ಡಿ ವೀಡಿಯೋ ಇಲ್ಲಿದೆ

ಮೊದಲಿಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ನಡೆದಿಲ್ಲ ಎಂದು ವಾದಿಸಿದ್ದ ರೆಡ್ಡಿ ಶ್ರೀನಿವಾಸ್, ಇದೀಗ ಮೃತಪಟ್ಟವರ ಖಾತೆಯಿಂದ ಹಣ ಡ್ರಾ ಆಗುತ್ತಿರುವುದು ಗೋಲ್‌ಮಾಲ್ ಹೌದು ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ವಿಡಿಯೋ ಬಿಡುಗಡೆ ಮಾಡಿರುವ ಅವರು, “ಸರ್ಕಾರ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಹಾಕುವುದರಿಂದ ಇಲಾಖೆಯ ಮಟ್ಟದಲ್ಲಿ ಯಾವುದೇ ಗೋಲ್‌ಮಾಲ್ ಸಾಧ್ಯವಿಲ್ಲ. ಆದರೆ, ಫಲಾನುಭವಿಗಳು ಮೃತಪಟ್ಟ ನಂತರವೂ ಅವರ ಖಾತೆಯಲ್ಲಿರುವ ಹಣವನ್ನು ಯಾರೋ ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಹಣ ಡ್ರಾ ಮಾಡಿದರೆ ಜೈಲು ಫಿಕ್ಸ್; ಅಕೌಂಟ್ ಸೀಜ್ ಮಾಡಲು ಸೂಚನೆ

“ಸತ್ತವರ ಬ್ಯಾಂಕ್ ಖಾತೆಗಳನ್ನು ಯಾರು ಬಳಸುತ್ತಿದ್ದಾರೆ ಮತ್ತು ಅದರಿಂದ ಯಾರು ಹಣ ಡ್ರಾ ಮಾಡುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ನಾವು ಅಕೌಂಟ್‌ಗಳ ಪರಿಶೀಲನೆ ನಡೆಸುತ್ತಿದ್ದೇವೆ. ಅಕ್ರಮವಾಗಿ ಹಣ ಡ್ರಾ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಕೇಸ್ ದಾಖಲಿಸಿ ಜೈಲಿಗೆ ಅಟ್ಟಲಾಗುವುದು. ಅಂತಹ ದುರಪಯೋಗವಾಗಿರುವ ಖಾತೆಗಳನ್ನು ತಕ್ಷಣವೇ ಸೀಜ್ ಮಾಡಲು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ರೆಡ್ಡಿ ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಪಾರದರ್ಶಕತೆ ಇದ್ದರೂ, ತಳಮಟ್ಟದಲ್ಲಿ ಸತ್ತವರ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿರುವ ಜಾಲದ ವಿರುದ್ಧ ತನಿಖೆ ಚುರುಕುಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:32 am, Sun, 9 August 26

Source link

Leave a Reply

Your email address will not be published. Required fields are marked *