ಬೆಂಗಳೂರು, (ಜೂನ್ 14): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು (Gruhalakshmi And Gruha Jyothi Scheme) ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು… ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ದಾಖಲೆಗಳೊಂದಿಗೆ ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಯೋಜನೆಗಳಿಗೆ ಯಾರ್ಯಾರು ಅರ್ಹರು ಎನ್ನುವ ವಿವರ ಇಲ್ಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
