ಹಾಸನ, ಜೂನ್ 19: ಕರ್ನಾಟಕದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಂಟಾಗಿರುವ ಆತಂಕವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನಿವಾರಿಸಿದ್ದಾರೆ. ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಈವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 29 ಕಂತುಗಳನ್ನು ನೀಡಲಾಗಿದ್ದು, ಉಚಿತ ಬಸ್ ಸೇವೆ 600 ಕೋಟಿ ಟ್ರಿಪ್‌ಗಳನ್ನು ದಾಟಿದೆ. ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳಾಗಿದೆ. ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಪ್ಪಾಗಿ ಜಮೆಯಾದ ಸುಮಾರು 114 ಕೋಟಿ ರೂ.ಗಳ ಹಣವನ್ನು ವಸೂಲಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದು ಪರಿಷ್ಕರಣೆಯ ಭಾಗವಾಗಿದ್ದು, ನ್ಯೂನತೆಗಳನ್ನು ಸರಿಪಡಿಸುವ ಗುರಿಯನ್ನು ಹೊಂದಿದೆ. ಯಾರೊಬ್ಬರಿಗೂ ಹಣ ನಿಲ್ಲುವುದಿಲ್ಲ ಎಂದು ರೇವಣ್ಣ ಭರವಸೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.