Headlines

ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ! – Kannada News | Video Recording of Women During Village Fair to Attract Rs 30000 Fine: Strict Warning in Nanjangud Goluru Festival

ಮೈಸೂರು, ಫೆಬ್ರವರಿ 10: ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ವಿಡಿಯೋ ಚಿತ್ರೀಕರಣ ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ವಿಶೇಷವೆಂದರೆ, ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಂಗುರ ಸಾರಿಸಿದ್ದಾರೆ.

ಇಂದಿನಿಂದ (ಫೆಬ್ರವರಿ 10) ಮೂರು ದಿನಗಳ ಕಾಲ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿ ಗ್ರಾಮದಲ್ಲಿ ಡಂಗುರ ಬಾರಿಸಿ ಜಾಗೃತಿ ಮೂಡಿಸಲಾಗಿದೆ. ಗ್ರಾಮದ ನಿವಾಸಿ ಜವರ ಎಂಬುವರ ಮೂಲಕ ತಮಟೆ ಬಾರಿಸಿ ಗ್ರಾಮಾದ್ಯಂತ ಈ ನಿಯಮಗಳನ್ನು ಪ್ರಕಟಿಸಲಾಗಿದ್ದು, ಜಾತ್ರೆ ಶಾಂತಿಯುತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *