Headlines

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್​​ ದರೋಡೆಗೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ – Kannada News | Nelamangala Gold Shop Owner Shot During Robbery Attempt in Dabaspete

ನೆಲಮಂಗಲ, ಆಗಸ್ಟ್​ 06: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ (firing) ನಡೆಸಿ ದರೋಡೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ (bengaluru rural) ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ನಡೆದಿದೆ. ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಮಾಲೀಕ ಪುನ್ನಾರಾಮ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡೆದಿದ್ದೇನು?

ಬೊಲೆರೋ ಕಾರಿನಲ್ಲಿ ಆಗಮಿಸಿದ್ದ ಐದಾರು ಜನರ ತಂಡ, ಆಭರಣ ಖರೀದಿಸುವವರಂತೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದೆ. ಬಳಿಕ ಚಿನ್ನಾಭರಣಗಳನ್ನು ದರೋಡೆ ಮಾಡಲು ಯತ್ನಿಸಿದ್ದು, ಈ ವೇಳೆ ಮಾಲೀಕ ಪುನ್ನಾರಾಮ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆರಳಿದ ದರೋಡೆಕೋರರು ಅವರ ಮೇಲೆ ಏಕಾಏಕಿ ಫೈರಿಂಗ್ ಮಾಡಿ ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಗುಂಡಿನ ಸದ್ದು: ಬೆಚ್ಚಿಬಿದ್ದ ಅಪಾರ್ಟ್‌ಮೆಂಟ್‌ ಜನರು; ನಡೆದಿದ್ದೇನು?

ಇನ್ನು ಘಟನಾ ಸ್ಥಳ ಪರಿಶೀಲನೆ ವೇಳೆ ಅಂಗಡಿಯಲ್ಲಿ 2 ಜೀವಂತ ಗುಂಡುಗಳು ಪತ್ತೆಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದು, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಆಟೋ ಕದ್ದು ಪರಾರಿಯಾದ ಖದೀಮರು

ಮನೆ ಮುಂದೆ ನಿಲ್ಲಿಸಿದ್ದ ಆಟೋ ಕದ್ದು ಖದೀಮರು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಜಕ್ಕಸಂದ್ರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಚಿಕ್ಕಮಗಳೂರು ನಿವಾಸಿ  ಸುನೀಲ್ ಅವರು 9 ತಿಂಗಳ ಹಿಂದಷ್ಟೇ ಹೊಸ ಆಟೋ ಖರೀದಿ ಮಾಡಿದ್ದರು.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

ತಡರಾತ್ರಿ ಹೊಂಚುಹಾಕಿದ್ದ ಮೂವರು ಕಳ್ಳರು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಆಟೋ ಕದ್ದು ಪರಾರಿ ಆಗಿದ್ದಾರೆ. ಕಳ್ಳರು ಆಟೋ ಕದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *