
ನವದೆಹಲಿ, ಏಪ್ರಿಲ್ 1: ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿಯ (BJP Office) ಹೊರಗೆ ಇಂದು ಸ್ಫೋಟ ಸಂಭವಿಸಿದೆ. ಸೆಕ್ಟರ್ 37ರಲ್ಲಿರುವ ಕಚೇರಿಯ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಗ್ರೆನೇಡ್ ಅನ್ನು ಎಸೆಯುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚಂಡೀಗಢದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೈಯಲ್ಲಿ ಹೆಲ್ಮೆಟ್ ಹಿಡಿದಿರುವ ವ್ಯಕ್ತಿಯೊಬ್ಬ ಗ್ರೆನೇಡ್ ತೆಗೆದು ಎಸೆಯುತ್ತಿರುವುದನ್ನು ಇನ್ನೊಬ್ಬ ವ್ಯಕ್ತಿ ರೆಕಾರ್ಡ್ ಮಾಡಿದ್ದಾನೆ. ಬಳಿಕ ಭಾರೀ ಸ್ಫೋಟದ ಸದ್ದು ಕೇಳುತ್ತದೆ. ದಾಳಿ ನಡೆಸಿದ ಇಬ್ಬರು ಶಂಕಿತರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಅವರ ಮುಖಗಳು ಸೆರೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ