ರಾಮನಗರ, ಜೂನ್ 29: ನಾಡಪ್ರಭು ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿದ ಚನ್ನಪಟ್ಟಣ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ, ಸಂಭ್ರಮದಿಂದ ಆಚರಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗಿತ್ತು. ಈ ಜಯಂತಿ ಆಚರಣೆಯ ಭಾಗವಾಗಿ ಗ್ರಾಮದಲ್ಲಿ ಬ್ಯಾನರ್ ಅಳವಡಿಸಲಾಗಿತ್ತು. ಕಿಡಿಗೇಡಿಗಳ ಈ ಕೃತ್ಯದ ಪರಿಣಾಮವಾಗಿ ಕೆಂಪೇಗೌಡರ ಭಾವಚಿತ್ರವಿದ್ದ ಬ್ಯಾನರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟನೆಯನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯ ಎಸಗಿದವರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
