ಚಪ್ಪಲಿಯಲ್ಲಿ ಹೊಡೆಸಿ ಬೆಂಕಿ ಹಾಕಿಸ್ತೀನಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಕಾಂಗ್ರೆಸ್ ರಾಜ್ಯ ಸಂಯೋಜಕ – Kannada News | Congress State Coordinator Threatens Shidlaghatta Municipal Commissioner with Assault and Arson

ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ

ಚಿಕ್ಕಬಳ್ಳಾಪುರ, ಜನವರಿ 14: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಆರೋಪಿತ ರಾಜೀವ್ ಗೌಡ ಅವರು ಕೆಪಿಸಿಸಿ ರಾಜ್ಯ ಸಂಯೋಜಕರಾಗಿದ್ದು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ದೂರವಾಣಿ ಕರೆ ವೇಳೆ ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ದಂಗೆ ಮಾಡಿಸುತ್ತೇನೆ’ ಎಂದು ಗಂಭೀರ ಬೆದರಿಕೆ ಹಾಕಲಾಗಿದೆ ಎಂದು ಪೌರಾಯುಕ್ತೆ ಅಮೃತಾ ಗೌಡ ದೂರಿದ್ದಾರೆ.

ಈ ವೇಳೆ ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಅವರ ಮೇಲೂ ಅವ್ಯಾಚ್ಚ ಹಾಗೂ ಅಶ್ಲಿಲ ಪದಗಳಿಂದ ನಿಂದನೆ ನಡೆದಿದ್ದು, ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೂ ಅವಮಾನಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ

ಈ ಘಟನೆಯಿಂದ ಶಿಡ್ಲಘಟ್ಟ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭಯಭೀತಗೊಂಡಿದ್ದು, ಸಾರ್ವಜನಿಕ ಸೇವೆ ನಿರ್ವಹಿಸುವ ಅಧಿಕಾರಿಗಳಿಗೆ ಈ ರೀತಿಯ ಬೆದರಿಕೆಗಳು ಅಸಹ್ಯಕರವಾಗಿವೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:02 am, Wed, 14 January 26

Source link

Leave a Reply

Your email address will not be published. Required fields are marked *