ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ – Kannada News | Narrow Escape for Passengers as KSRTC Bus Catches Fire Near Huliyar, Tumakuru

ತುಮಕೂರು, ಏಪ್ರಿಲ್​​ 16: ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *