ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – Kannada News | Man lures 4 year old Child with chocolates rapes her at Pune Railway station

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು ರೈಲಿಗಾಗಿ ಕಾಯುತ್ತಿದ್ದರು. ಆಗ ಅಪ್ಪ ಟಾಯ್ಲೆಟ್​​ಗೆ ಹೋಗಿ ಬರುವಾಗ ಮಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತು. ಮಗಳು ಎಲ್ಲೂ ಕಾಣದಿದ್ದಾಗ ಇಂದು ಬೆಳಗಿನ ಜಾವ 3 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ರೈಲ್ವೆ ನಿಲ್ದಾಣದ ಸಿಸಿಟಿವಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿ ಆ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವುದು ರೆಕಾರ್ಡ್ ಆಗಿತ್ತು. ಆಕೆ ಆತನ ಕೈ ಹಿಡಿದುಕೊಂಡು ಹೋಗುತ್ತಿದ್ದಳು. ಆದರೆ, ಆತ ಯಾರೆಂದು ಆ ಮಗುವಿನ ಅಪ್ಪ-ಅಮ್ಮನಿಗೆ ಗೊತ್ತಿರಲಿಲ್ಲ. ಕೊನೆಗೂ ಆಕೆ ಸಿಕ್ಕಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆರೋಪಿಯು ಬಾಲಕಿಯನ್ನು ರೈಲ್ವೆ ನಿಲ್ದಾಣದ ಆವರಣದೊಳಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗು ನೀಡಿದ ವಿವರಣೆಯ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಗುರುತಿಸಿದರು. ಪೊಲೀಸರು ಈ ಘಟನೆ ನಡೆದ 4 ಗಂಟೆಗಳಲ್ಲಿ ಆತನನ್ನು ಬಂಧಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *