ಬೆಂಗಳೂರು, ಆಗಸ್ಟ್ 18: ಚಾಮರಾಜನಗರದ ಹನೂರು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ ಹೇಳಿಕೆಗೆ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ರಾಜ್ಯಗಳ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ವಿಚಾರಗಳಲ್ಲಿ ಇತರೆ ರಾಜ್ಯಗಳು ಮಧ್ಯಪ್ರವೇಶ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಇದು ಸಂಯುಕ್ತ ರಚನೆ. ಯಾವುದೇ ರಾಜ್ಯ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ನಾನು ತಮಿಳುನಾಡು ವಿಚಾರದಲ್ಲಿ ತಲೆ ಹಾಕಿಲ್ಲ. ನಮ್ಮ ರಾಜ್ಯದ ರಕ್ಷಣೆ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ. ಸಿಎಂ ವಿಜಯ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ತಮಿಳುನಾಡು ನಾಯಕರು ಅವರ ಕೆಲಸ ಅವರು ಮಾಡಲಿ, ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
