ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ! – Kannada News | Chikkaballapur Bus Robbery: Rupees 55 Lakh Belonging to Businessman Stolen

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ.

ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57 ಎಫ್​-3911 ಸಂಖ್ಯೆಯ ಬಸ್​​ ನಿಲ್ಲಿಸಲಾಗಿತ್ತು. ಊಟಕ್ಕೆಂದು ಕೆಳಗೆ ಇಳಿದು ಬರೋವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳುವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ ರಾವ್​ಗೆ ಸೇರಿದ್ದು, ಬೆಂಗಳೂರಿನಲ್ಲಿದ್ದ ಮನೆ ಮಾರಾಟದಿಂದ ಬಂದಿದ್ದ ನಗದನ್ನು ಅವರು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:

ಕ್ಷಣಮಾತ್ರದಲ್ಲಿ ಹಣಕದ್ದು ಎಸ್ಕೇಪ್​​

ಟಾಟಾ ಇಂಡಿಕಾ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಹಣ ದೋಚಿದ್ದಾನೆ ಎಂದು ಬಸ್​ನಲ್ಲಿದ್ದ ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಕಾರಿನಿಂದ ಇಳಿದು ನೇರವಾಗಿ ಬಸ್​ನೊಳಗೆ ನುಗ್ಗಿದ್ದ ವ್ಯಕ್ತಿ ಸೀಟ್ ನಂ.4ರಲ್ಲಿದ್ದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಪೆರೇಸಂದ್ರ ಠಾಣೆಗೆ ಉದ್ಯಮಿ ಕೆ.ವೆಂಕಟೇಶ್ವರ ರಾವ್ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:59 am, Fri, 19 December 25

Source link

Leave a Reply

Your email address will not be published. Required fields are marked *