ಚಿಕ್ಕಮಗಳೂರು, ಮೇ 04: ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್(8) ಮೃತರು. ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ದುರಂತ ಸಂಭವಿಸಿದೆ. ಅರ್ಮನ್ ಎಂಬಾ ಬದುಕುಳಿದಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
