ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

ಬೆಂಗಳೂರು, ಮಾರ್ಚ್ 24: ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ ಚಿನ್ನ ಖರೀದಿದಾರರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆಯೇ ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಗ್ರಾಹಕರು, ವಿಶೇಷವಾಗಿ ಮಹಿಳೆಯರು ಚಿನ್ನ ಖರೀದಿಗೆ ಮುಗಿಬೀಳುತ್ತಿದ್ದಾರೆ.

ಬೆಲೆ ಇಳಿಕೆಯಾಗಿದ್ದಕ್ಕೆ ಹಲವು ಮಹಿಳಾ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ, ಮಧ್ಯಮ ವರ್ಗದ ಜನರಿಗೆ ಇದು ಚಿನ್ನ ಖರೀದಿಸುವ ಉತ್ತಮ ಅವಕಾಶವೆಂದು ಅಭಿಪ್ರಾಯಪಟ್ಟಿದ್ದಾರೆ. ಈ ಬೆಲೆ ಕುಸಿತಕ್ಕೆ ಜಾಗತಿಕ ಆರ್ಥಿಕ ಕಾರಣಗಳಿವೆ ಎಂದು ಅರ್ಥಶಾಸ್ತ್ರಜ್ಞ ಡಾ. ಎಸ್.ಆರ್. ಕೇಶವ್ ವಿಶ್ಲೇಷಿಸಿದ್ದಾರೆ. ಯುಎಸ್ ಡಾಲರ್ ಬಲವರ್ಧನೆ, ಅಮೆರಿಕಾದ ಫೆಡರಲ್ ರಿಸರ್ವ್ ಬಡ್ಡಿ ದರಗಳನ್ನು ಕಡಿಮೆ ಮಾಡದಿರುವ ನಿರ್ಧಾರ ಮತ್ತು ಗೋಲ್ಡ್ ಪೇಪರ್‌ಗಳಲ್ಲಿ ಹೂಡಿಕೆ ಮಾಡಿದವರು ಲಾಭ ಗಳಿಸಿ ವಿಥ್ ಡ್ರಾ ಮಾಡುತ್ತಿರುವುದು ಪ್ರಮುಖ ಕಾರಣಗಳಾಗಿವೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕುಸಿತದ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *