
ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ ಬ್ಯಾಗ್ ಕದ್ದುಕೊಂಡು ಹೋದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.