ಬೆಂಗಳೂರು, ಜುಲೈ 15: ಚಿನ್ನಸ್ವಾಮಿ ಸ್ಟೇಡಿಯಲ್ಲಿ ಕಾಲ್ತುಳಿತ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಅಧಿಕಾರಿಗಳು ನಿರಪರಾಧಿಗಳಾದರೆ ಅಪರಾಧಿಗಳು ಯಾರು? ಈ ಸಾವಿಗೆ ನ್ಯಾಯ ಎಲ್ಲಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಪತ್ನಿ, ಮಕ್ಕಳ ಜತೆ ಸ್ಟೇಜ್ ಮೇಲೆ ಇದ್ದವರ ಮೇಲೆ ಕ್ರಮ ಆಗಬೇಕಿತ್ತು. ಆದರೆ 11 ಜನರ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಲು ಸರ್ಕಾರ ಹೊರಟಿದೆ. ನಮ್ಮ ಸರ್ಕಾರ ಬಂದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡ್ತೇವೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
