Headlines

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ! – Kannada News | Chikkaballapur Chimul Election: Cash and Silver Plates Offered for Votes

ಚಿಕ್ಕಬಳ್ಳಾಪುರ, ಫೆ. 01: ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರು ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ. ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡಿದ್ದಾರೆ. ಮತ್ತೊಬ್ಬ ಅಭ್ಯರ್ಥಿ 8 ಲಕ್ಷ ರೂಪಾಯಿ ನಗದು ಮತ್ತು ಬೆಳ್ಳಿ ತಟ್ಟೆ ವಿತರಿಸಿದ್ದಾರೆ. ಕೋಲಾರದಿಂದ ವಿಭಜನೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಕ್ಕೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಒಟ್ಟು 952 ಮತದಾರರು ಇದ್ದು, ಪ್ರತಿಯೊಂದು ಕ್ಷೇತ್ರದಲ್ಲೂ ಲಕ್ಷಗಟ್ಟಲೆ ಹಣದ ಹಂಚಿಕೆ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *