ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಆರು ತಿಂಗಳು ಕಳೆದಿರಬೇಕಿತ್ತು. ಆರಂಭದಲ್ಲಿ ಈ ಚಿತ್ರವನ್ನು 2026ರ ಸಂಕ್ರಾಂತಿಗೆ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಹಲವು ಕಾರಣಗಳಿಂದ ಸಿನಿಮಾ ಮುಂದೂಡಲ್ಪಟ್ಟಿದೆ. ಚಿತ್ರತಂಡ ಇದುವರೆಗೆ ಯಾವುದೇ ಅಧಿಕೃತ ಬಿಡುಗಡೆ ದಿನಾಂಕವನ್ನು ಪ್ರಕಟಿಸಿಲ್ಲ. ಈಗ ಚಿತ್ರಕ್ಕೆ ಸೆನ್ಸಾರ್ ಆಗಿದೆ ಎಂದು ವರದಿ ಆಗಿದೆ.
ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಇಲ್ಲದ ಕಾರಣ ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ಹೊಸ ವದಂತಿಗಳು ಹರಿದಾಡುತ್ತಿವೆ. ಈಗಾಗಲೇ ಸಿನಿಮಾ ಬಗ್ಗೆ ಹಲವು ಸುದ್ದಿಗಳು ಓಡಾಡಿವೆಹಹ. ಈ ಮೊದಲು ವಿಜಯ್ ಜನ್ಮದಿನದ ಅಂಗವಾಗಿ ಜೂನ್ ಅಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆಯಂತೆ. ಹೀಗಾಗಿ ಸಿನಿಮಾ ಜುಲೈ ಮಧ್ಯಭಾಗದಲ್ಲಿ ತೆರೆಗೆ ಬರಬಹುದು ಎಂದು ಅಂದಾಜಿಸಲಾಗಿದೆ.
ಕೆಲವು ವರದಿಗಳ ಪ್ರಕಾರ ಆಗಸ್ಟ್ 7ರಂದು ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ. ಈಗಾಗಲೇ ಚಿತ್ರ ಲೀಕ್ ಆಗಿ ಸಿನಿಮಾ ಮೇಲಿನ ಆಸಕ್ತಿಯೇ ಜನರಿಗೆ ಹೋಗಿದೆ. ಹೀಗಾಗಿ, ಒಂದರಿಂದ ಎರಡು ವಾರ ಮಾತ್ರ ಸಿನಿಮಾ ಪ್ರದರ್ಶನ ಕಂಡರೆ ಸಾಕು ಎಂಬುದು ತಂಡದ ಆಲೋಚನೆ ಎನ್ನಲಾಗುತ್ತಿದೆ. ಹೀಗಾಗಿ, ‘ಟಾಕ್ಸಿಕ್’ ರಿಲೀಸ್ಗೂ 20 ದಿನ ಮೊದಲು ಈ ಚಿತ್ರ ತೆರೆಗೆ ತರುವ ಆಲೋಚನೆ ತಂಡದ್ದಿರಬಹುದು.
ಅಧಿಕೃತ ಪ್ರಕಟಣೆಗೆ ಕಾಯುತ್ತಿರುವ ಅಭಿಮಾನಿಗಳು
ಚಿತ್ರತಂಡದಿಂದ ಈ ವರದಿಗಳಿಗೆ ಯಾವುದೇ ಅಧಿಕೃತ ಮುದ್ರೆ ಸಿಕ್ಕಿಲ್ಲ. ಈ ಹಿಂದೆ ಜೂನ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂಬ ಸುದ್ದಿಗಳು ಕೂಡ ಸುಳ್ಳಾಗಿದ್ದವು. ಗೊಂದಲಗಳಿಗೆ ತೆರೆ ಎಳೆಯಲು ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಬೇಕಿದೆ.
ಇದನ್ನೂ ಓದಿ: ‘ಜನ ನಾಯಗನ್’ ನಿರ್ಮಾಪಕರಿಗೆ ಪ್ರಮುಖ ಜವಾಬ್ದಾರಿ ವಹಿಸಿದ ಸಿಎಂ ವಿಜಯ್
ಎಚ್. ವಿನೋದ್ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
