
ಬೆಂಗಳೂರು, (ಜೂನ್ 15): ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ (BZ Zameer ahmed khan) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು, ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.