Headlines

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ – Kannada News | PM Modi thanks Donald Trump for reducing tariffs says His leadership vital for global peace

ನವದೆಹಲಿ, ಫೆಬ್ರವರಿ 2: ಭಾರತದ ಮೇಲಿನ ಶೇ. 25ರಷ್ಟು ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಅಲ್ಲದೆ, ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ ನಮ್ಮ ಮುಂದಿದೆ ಎಂದು ಕೂಡ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಿದ್ದಕ್ಕಾಗಿ ಭಾರತದ 1.4 ಬಿಲಿಯನ್ ಜನರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಭಾರತದಲ್ಲಿ ತಯಾರಾದ ಉತ್ಪನ್ನಗಳು ಈಗ ಶೇ. 18ರಷ್ಟು ಕಡಿಮೆ ಸುಂಕವನ್ನು ಹೊಂದಿರುವುದು ಸಂತೋಷದ ಸಂಗತಿಯಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ನನ್ನ ಆತ್ಮೀಯ ಗೆಳೆಯರಾದ ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಇಂದು ಮಾತನಾಡಿ ಸಂತೋಷವಾಯಿತು. ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು ಈಗ ಶೇ. 25ರ ಬದಲು ಶೇ. 18ರಷ್ಟು ಸುಂಕವನ್ನು ಮಾತ್ರ ಹೊಂದುತ್ತಿರುವುದು ಸಂತೋಷ ತಂದಿದೆ. ಈ ಅದ್ಭುತ ಘೋಷಣೆಗಾಗಿ ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

“ಎರಡು ದೊಡ್ಡ ಆರ್ಥಿಕತೆಗಳು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳು ಒಟ್ಟಾಗಿ ಕೆಲಸ ಮಾಡಿದಾಗ ಅದು ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಅಲ್ಲದೆ ಪರಸ್ಪರ ಅಪಾರ ಅವಕಾಶಗಳನ್ನು ತೆರೆಯುತ್ತದೆ. ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯಗತ್ಯ. ಶಾಂತಿಗಾಗಿ ಅವರ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ

ವ್ಯಾಪಾರ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ರಷ್ಯಾದ ತೈಲ ಖರೀದಿಯನ್ನು ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇಂದು ಟ್ರಂಪ್ ತಮ್ಮ ಘೋಷಣೆಯ ವೇಳೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಷಯವನ್ನು ಮಾತ್ರವಲ್ಲದೆ ಭಾರತ ರಷ್ಯಾದ ಬದಲು ಅಮೆರಿಕ ಹಾಗೂ ವೆನೆಜುವೆಲಾದಿಂದ ತೈಲ ಖರೀದಿ ಮಾಡಲಿದೆ ಎಂದು ಕೂಡ ಹೇಳಿದ್ದರು. ಆದರೆ, ಈ ಬಗ್ಗೆ ಭಾರತ ಸರ್ಕಾರದಿಂದ ಯಾವುದೇ ಸ್ಪಷ್ಟನೆ ದೊರೆತಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *