ಬೆಂಗಳೂರು, ಜುಲೈ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲಾಗಿ ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದಿದ್ದರೂ, ನಗರದಲ್ಲಿ ಹಳೆಯ ಬಿಬಿಎಂಪಿ ನಾಮಫಲಕಗಳು ಇನ್ನೂ ರಾರಾಜಿಸುತ್ತಿವೆ. ಜಿಬಿಎ ಅಡಿ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಎಂಬ ಐದು ಹೊಸ ನಗರಪಾಲಿಕೆಗಳು ರೂಪುಗೊಂಡಿವೆ. ಆದರೆ, ಈ ಬದಲಾವಣೆಗೆ ಅನುಗುಣವಾಗಿ ನಾಮಫಲಕಗಳನ್ನು ಅಳವಡಿಸುವಲ್ಲಿ ಅಧಿಕಾರಿಗಳು ತೀವ್ರ ವಿಳಂಬ ಮಾಡುತ್ತಿದ್ದಾರೆ. ಹಳೆಯ ಬೋರ್ಡ್‌ಗಳು ಯಥಾಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರು ತೀವ್ರ ಗೊಂದಲಕ್ಕೀಡಾಗಿದ್ದಾರೆ. ತಮ್ಮ ವಾರ್ಡ್ ಯಾವುದು, ಯಾವ ನಗರಪಾಲಿಕೆ ವ್ಯಾಪ್ತಿಗೆ ಬರುತ್ತೆ, ವಾರ್ಡ್ ಸಂಖ್ಯೆ ಬದಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿಯಿಲ್ಲ. ಇದರಿಂದಾಗಿ ನಾಗರಿಕರು ತಮ್ಮ ಸಮಸ್ಯೆಗಳನ್ನು ಯಾರಿಗೆ ತಿಳಿಸಬೇಕು ಎಂಬ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.