ಬೆಂಗಳೂರು, ಜುಲೈ 10: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಣೆ ಮಾಡುವಂತೆ ಕೋರಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದಾಗ್ಯೂ, ಸರ್ಕಾರವು ಮೇ 20ರ ಆದೇಶವನ್ನು ಮಾರ್ಪಡಿಸುವಂತೆ ಮನವಿ ಮಾಡಿದ್ದು, ಡಿಸೆಂಬರ್ 31ರವರೆಗೆ ಸಮಯ ವಿಸ್ತರಿಸುವಂತೆ ಕೋರಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಇಆರ್) ನಡೆಯುತ್ತಿರುವುದರಿಂದ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಆಡಳಿತಾತ್ಮಕ ನಿರ್ಬಂಧಗಳು ಇವೆ ಎಂದು ಸರ್ಕಾರ ಅರ್ಜಿಯಲ್ಲಿ ತಿಳಿಸಿದೆ. ಈ ಪ್ರಕ್ರಿಯೆಗೆ ದೊಡ್ಡ ಸಂಖ್ಯೆಯ ಸಿಬ್ಬಂದಿಗಳು ನಿಯೋಜಿತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ನಾಲ್ಕು ತಿಂಗಳ ಕಾಲಾವಕಾಶ ಕೋರಿರುವ ಸರ್ಕಾರ, ಆಗಸ್ಟ್ 31ರ ಗಡುವಿನೊಳಗೆ ಚುನಾವಣೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
