ಜಿಬಿಎ ವ್ಯಾಪ್ತಿಯಲ್ಲಿ ಶೇ 76.32ರಷ್ಟು ಮ್ಯಾಪಿಂಗ್: ಬೆಂಗಳೂರಿನಲ್ಲಿ SIR ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಆಯುಕ್ತರು – Kannada News | 76.32% mapping in GBA area: Commissioner Maheshwar Rao briefs about SIR process in Bengaluru

GBA ಮುಖ್ಯ ಆಯುಕ್ತ ಮಹೇಶ್ವರ ರಾವ್Image Credit source: tv9 kannada

ಬೆಂಗಳೂರು, ಜೂನ್​​ 29: ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಮುಂದಾಗಿದೆ. ಹೀಗಾಗಿ ಕರ್ನಾಟಕದಲ್ಲಿ ನಾಳೆಯಿಂದ (ಜೂನ್ 30ರಿಂದ) ಎಸ್​ಐಆರ್​ ಶುರುವಾಗಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಇತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲೂ ನಾಳೆಯಿಂದ ಜುಲೈ 29ರವರೆಗೂ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್ ಹೇಳಿದ್ದಾರೆ.

76.32% ರಷ್ಟು ಮ್ಯಾಪಿಂಗ್ ಆಗಿದೆ ಎಂದ ಮಹೇಶ್ವರ್ ರಾವ್

ರಾಜ್ಯಾದ್ಯಂತ ನಾಳೆಯಿಂರ ಎಸ್​ಐಆರ್​​ ಆರಂಭ ಹಿನ್ನಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್,  ಜಿಬಿಎ ವ್ಯಾಪ್ತಿಯಲ್ಲಿ ನಾಳೆಯಿಂದ ಜುಲೈ 29ರವರೆಗೂ ನಡೆಯಲಿದೆ. 1,03,88, 363 ಮತದಾರರ ಅಂದರೆ 76.32% ರಷ್ಟು ಮ್ಯಾಪಿಂಗ್ ಆಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ

ಇನ್ನು ಜಿಬಿಎ ವ್ಯಾಪ್ತಿಯಲ್ಲಿ 28 ಮತದಾರರ ನೊಂದಣಾಧಿಕಾರಿಗಳು, 75 ಸಹಾಯಕ ಮತದಾರರ ನೋಂದಣಾಧಿಕಾರಿಗಳು, 905 BLO ಸೂಪರ್ವೈಸರ್​ಗಳು, 8972 ಬಿಎಲ್​ಓಗಳ ನೇಮಕ ಮಾಡಲಾಗಿದೆ. 16505 ರಾಜಕೀಯ ಪಕ್ಷಗಳ ಮುಖಂಡರ ಬಿಎಲ್​​ಓಗಳೂ ಹಾಜರಿರಲಿದ್ದಾರೆ ಎಂದು ತಿಳಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 8972 ಮತಗಟ್ಟೆಗಳು

ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 8972 ಮತಗಟ್ಟೆಗಳಿವೆ. 7685 ಕಾಂಗ್ರೆಸ್, 8193 ಬಿಜೆಪಿ, 831 ಜೆಡಿಎಸ್, 90 ಎಎಪಿ ಮತ್ತು ಪಕ್ಷದ ಮುಖಂಡರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಬಿಎಲ್​​ಓಗಳ ಜತೆ ಇರಲಿದ್ದಾರೆ ಎಂದು ಮಹೇಶ್ವರ್ ರಾವ್ ಮಾಹಿತಿ ನೀಡಿದರು. ಇನ್ನು ಸುದ್ದಿಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಖ್ಯ ಆಯುಕ್ತ ಮಹೇಶ್ವರ ರಾವ್, ವಿಶೇಷ ಆಯುಕ್ತರು ಸೇರಿದಂತೆ ಐವರು ನಗರ ಪಾಲಿಕೆಗಳ ಆಯುಕ್ತರು ಭಾಗಿಯಾಗಿದ್ದರು.

ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಕುರಿತು ಬಿಎಲ್​​ಓ ಹಾಗೂ ಬಿಲ್​ಎಗಳಿಗೆ ತರಬೇತಿ ನೀಡಲಾಗಿದೆ. ಮತದಾರರು ಗಣತಿ ನಮೂನೆಗಳನ್ನು ನೀಡುವ ಸಂದರ್ಭದಲ್ಲಿ ಲಭ್ಯವಿರದ ಸಂದರ್ಭದಲ್ಲಿ ಇನ್ನು ಎರಡು ಭಾರಿ ಭೇಟಿ ನೀಡಿ ಗಣತಿ ನಮೂನೆಗಳನ್ನು ನೀಡಲು ಕ್ರಮ ವಹಿಸಲಾಗುವುದು. ಆನ್‌ಲೈನ್ ವಿಧಾನದ ಮೂಲಕ ಅಪ್‌ ಲೋಡ್ ಮಾಡಲು ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ. ಪ್ರತಿಯೊಬ್ಬ ಮತದಾರರು ಈ ನಮೂನೆಯನ್ನು ಅಗತ್ಯ ಮಾಹಿತಿ ಮತ್ತು ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಮತಗಟ್ಟೆ ಸ್ತರದ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿದರು.

ಇದನ್ನು ಓದಿ: ಮನೆ ಶಿಫ್ಟ್ ಮಾಡಿದವರಿಗೆ ಬಿಗ್ ಶಾಕ್ ಕಾದಿದೆ; ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ

ಮತದಾರನು ದಾಖಲೆಗಳೊಂದಿಗೆ ಭರ್ತಿ ಮಾಡಿದ ನಮೂನೆಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ ಸಂದರ್ಭದಲ್ಲಿ, ಮತಗಟ್ಟೆ ಮಟ್ಟದ ಅಧಿಕಾರಿಗಳು ಆ ಮತದಾರರ ಮನೆಗೆ ಭೇಟಿ ನೀಡಿದಾಗ ಆ ದಾಖಲೆಯನ್ನು ಪರಿಶೀಲಿಸುತ್ತಾರೆ. ಮತದಾರರ ನೋಂದಣಾಧಿಕಾರಿ ಕಛೇರಿಯಲ್ಲಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿ ಕಛೇರಿಯಲ್ಲಿ 2855 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:20 pm, Mon, 29 June 26

Source link

Leave a Reply

Your email address will not be published. Required fields are marked *