ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ ಅಭ್ಯರ್ಥಿಗಳು ಇದ್ದಾರೆ. ಬಹಳಷ್ಟು ಜನರನ್ನು ಬೆಳೆಸಿದ್ದೇವೆ, ಮೆರೆಸಿದ್ದೇವೆ ಎಂದು ಹೇಳಿಕೊಳ್ತಾರೆ. ಯಾವಾಗ ಯಾರನ್ನು ಮೆರೆಸುತ್ತಾರೋ ಯಾರಿಗೆ ಗೊತ್ತು. ಈಗ ಯಾರೋ ಒಬ್ಬರನ್ನು ಮೆರೆಸಲು ಜಿಟಿಡಿ ಹೊರಟಿದ್ದಾರೆ. ಜಿ.ಟಿ. ದೇವೇಗೌಡಗೆ ನಿಯತ್ತು ಏನಾದಾರೂ ಇದೆಯಾ? ಚಾಮುಂಡೇಶ್ವರಿ ಕ್ಷೇತ್ರಕ್ಕೂ ನನಗೂ ಭಾವನಾತ್ಮಕ ಸಂಬಂಧ ಇದೆ. ಮುಂಡೇಶ್ವರಿ ಕ್ಷೇತ್ರದಲ್ಲಿ ಯಾರನ್ನೇ ಅಭ್ಯರ್ಥಿ ಮಾಡಿದ್ರೂ ಗೆಲ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
