Headlines

ಜೂನಿಯರ್ ಎನ್‌ಟಿಆರ್ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ; ಸ್ವತಃ ಅಪ್‌ಡೇಟ್ ನೀಡಿದ ನಟ – Kannada News | Jr NTR undergoes successful Shoulder Surgery Health Update Dragon Movie

ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರ ಭುಜದ ಶಸ್ತ್ರಚಿಕಿತ್ಸೆ (Shoulder Surgery) ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಜೂನಿಯರ್ ಎನ್‌ಟಿಆರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಶಸ್ತ್ರಚಿಕಿತ್ಸೆಯ ನಂತರ ತಮ್ಮ ಆರೋಗ್ಯದ ಕುರಿತು ಅಭಿಮಾನಿಗಳಿಗೆ ಮಾಹಿತಿ (Health Update) ನೀಡಿದ್ದಾರೆ. ಅವರು ಕ್ಷೇಮವಾಗಿದ್ದಾರೆ ಎಂಬುದನ್ನು ತಿಳಿದು ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಎನ್‌ಟಿಆರ್ ನೀಡಿದ ಅಪ್‌ಡೇಟ್:

ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಬುಧವಾರ (ಆಗಸ್ಟ್ 12) ಸಂಜೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಎನ್‌ಟಿಆರ್, ‘ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಗೆ ನಾನು ಆಭಾರಿಯಾಗಿದ್ದೇನೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದ್ದು, ನಾನು ಆರಾಮವಾಗಿದ್ದೇನೆ. ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡಕ್ಕೆ ನನ್ನ ಧನ್ಯವಾದಗಳು. ನನ್ನ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳ ಬೆಂಬಲವೇ ನನಗೆ ಪ್ರತಿದಿನ ಶಕ್ತಿ ನೀಡುತ್ತದೆ. ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಆಸ್ಪತ್ರೆಯ ಹೆಲ್ತ್ ಬುಲೆಟಿನ್:

ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯ ಮೂಳೆ ರೋಗ ತಜ್ಞರು ಈ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಿದ್ದಾರೆ. ‘ಎನ್‌ಟಿಆರ್ ಅವರ ಭುಜಕ್ಕೆ ಗಾಯವಾಗಿತ್ತು. ತಜ್ಞ ವೈದ್ಯರ ಸಮಾಲೋಚನೆಯ ನಂತರ, ಅವರು ಶೀಘ್ರವಾಗಿ ಮತ್ತು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳಲು ಆರ್ಥ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆ ಅಗತ್ಯವೆಂದು ನಿರ್ಧರಿಸಲಾಯಿತು. ಸರ್ಜರಿ ಸಂಪೂರ್ಣ ಯಶಸ್ವಿಯಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ 2ರಿಂದ 3 ತಿಂಗಳ ಕಾಲ ಸೂಕ್ತ ವೈದ್ಯಕೀಯ ಮಾರ್ಗದರ್ಶನದಲ್ಲಿ ಪುನಶ್ಚೇತನ ಪ್ರಕ್ರಿಯೆಗೆ ಒಳಗಾಗಲಿದ್ದು, ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿದ್ದಾರೆ’ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಜುಲೈ ಕೊನೆಯ ವಾರದಲ್ಲಿ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದಾಗ ಜೂನಿಯರ್ ಎನ್‌ಟಿಆರ್ ಅವರಿಗೆ ಗಾಯವಾಗಿತ್ತು. ಆ ಸಮಯದಲ್ಲಿ ಈ ವಿಷಯವನ್ನು ಅಧಿಕೃತವಾಗಿ ದೃಢಪಡಿಸಿದ್ದ ಸಿನಿಮಾ ತಂಡ, ‘ಎನ್‌ಟಿಆರ್ ಅವರಿಗೆ ಭುಜಕ್ಕೆ ದುರದೃಷ್ಟವಶಾತ್ ಗಾಯವಾಗಿದೆ ಎಂಬುದನ್ನು ತಿಳಿಸಲು ವಿಷಾದಿಸುತ್ತೇವೆ. ವೈದ್ಯಕೀಯ ತಪಾಸಣೆಯ ನಂತರ, ಅವರು ಸಂಪೂರ್ಣವಾಗಿ ಹಾಗೂ ಸುಲಭವಾಗಿ ಚೇತರಿಸಿಕೊಳ್ಳಲು ತಜ್ಞ ವೈದ್ಯರ ತಂಡವು 6ರಿಂದ 8 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದೆ’ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ: ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ

ಅಭಿಮಾನಿಗಳಿಗೆ ಧೈರ್ಯ ತುಂಬಿದ್ದ ಚಿತ್ರತಂಡ:

ಎನ್‌ಟಿಆರ್ ಅವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಅಭಿಮಾನಿಗಳು ತೀವ್ರ ಆತಂಕಕ್ಕೊಳಗಾಗಿದ್ದಾಗ, ಚಿತ್ರತಂಡ ಮತ್ತೊಂದು ಹೇಳಿಕೆ ನೀಡಿ ಧೈರ್ಯ ತುಂಬಿತ್ತು. ‘ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ನಾವು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇವೆ. ಅವರ ಆರೋಗ್ಯ ಮತ್ತು ಚೇತರಿಕೆಯ ಕುರಿತು ಸೂಕ್ತ ಸಮಯದಲ್ಲಿ ಅಧಿಕೃತ ಅಪ್‌ಡೇಟ್‌ಗಳನ್ನು ನಾವು ಹಂಚಿಕೊಳ್ಳುತ್ತಿರುತ್ತೇವೆ. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಆ ಸಂದರ್ಭದಲ್ಲಿ ತಿಳಿಸಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *