ಜೆಮಿಮಾ ಮಿಂಚಿಂಗ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾದ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (0) ಶೂನ್ಯಕ್ಕೆ ಔಟಾಗಿದ್ದರು. ಇನ್ನು ಶಫಾಲಿ ವರ್ಮಾ ಕಲೆಹಾಕಿದ್ದು ಕೇವಲ 2 ರನ್​ ಮಾತ್ರ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಯಾಸ್ತಿಕಾ ಭಾಟಿಯಾ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ 40 ಎಸೆತಗಳಲ್ಲಿ 54 ರನ್​ಗಳನ್ನು ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೆಮಿಮಾರೊಡ್ರಿಗಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. 40 ಎಸೆತಗಳನ್ನು ಎದುರಿಸಿದ ಜೆಮಿಮಾ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 69 ರನ್​ ಸಿಡಿಸಿದರು. ಈ ಸ್ಫೋಟಕ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 188 ರನ್ ಕಲೆಹಾಕಿತು.

189 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 150 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 38 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

 

Source link

Leave a Reply

Your email address will not be published. Required fields are marked *